ಬೆಂಗಳೂರು, ಮೇ 05 (DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ಸದ್ಯ ನಿಯಂತ್ರಣಕ್ಕೆ ಬರುವಂತೆ ಗೋಚರಿಸುತ್ತಿಲ್ಲ. ಬುಧವಾರದಂದು ರಾಜ್ಯದಲ್ಲಿ 50,112 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ 346 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಇಂದಿನ ಸೋಂಕಿತ ಪ್ರಕರಣಗಳ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 17,41,046ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 26841 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಚೇತರಿಕೆ ಕಂಡವರ ಸಂಖ್ಯೆ 12,36854ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 4,87,288 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 23,106 ಮಂದಿಗೆ ಸೋಂಕು ದೃಢಪಟ್ಟಿದ್ದು, 161 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.