ಕೋಲ್ಕತ್ತಾ, ಮೇ 05 (DaijiworldNews/SM): ಬಿಜೆಪಿ ವಿರುದ್ಧದ ನೇರ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಪ್ರಚಂಡ ಗೆಲುವು ದಾಖಲಿಸಿದ್ದು, ಮೂರನೇ ಬಾರಿಗೆ ಸಿಎಂ ಆಗಿ ಮಮತಾ ಅಧಿಕಾರ ಸ್ವೀಕರಿಸಿದ್ದಾರೆ. ಇದೀಗ ಮತ್ತೊಮ್ಮೆ ಅಧಿಕಾರ ವಹಿಸಿಕೊಂಡ ದೀದಿಗೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.
ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರೂ ಪಕ್ಷದ ಸದಸ್ಯರ ಒಮ್ಮತದ ಮೇರೆಗೆ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇದೀಘ ಮೂರನೇ ಬಾರಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದು, ಪಶ್ಚಿಮ ಬಂಗಾಳಕ್ಕೆ ಕೇಂದ್ರದಿಂದ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಇನ್ನು ದೀದಿಗೆ ಆರಂಭದಿಂದಲೂ ಬೆಂಬಲ ನೀಡಿದ್ದ ಅಖಿಲೇಶ್ ಯಾದವ್ ಕೂಡ ದೀದಿಗೆ ಶುಭಹಾರೈಸಿದ್ದಾರೆ. ಮಹಿಳಾ ನಾಯಕಿಯ ದಿಟ್ಟ ಹೋರಾಟಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದ್ದಕ್ಕೆ ದೀದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಮತ್ತೊಂದೆಡೆ ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ಕೂಡ ಮಮತಾ ಬ್ಯಾನರ್ಜಿ ಅವರಿಗೆ ಶುಭ ಹಾರೈಸಿದ್ದಾರೆ. ಇಷ್ಟೇ ಅಲ್ಲದೆ, ಇನ್ನೂ ಕೂಡ ಅನೇಕ ಮಂದಿ ಸಿಎಂ ದೀದಿ ಅವರಿಗೆ ಶುಭೈಹಾರೈಸಿದ್ದು, ಮುಂದಿನ ಅವದಿಗೆ ಉತ್ತಮ ಆಡಳಿತ ನೀಡಲಿ ಎಂದು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.