ಬೆಂಗಳೂರು, ಮೇ. 06 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜನತಾ ಕರ್ಫ್ಯೂ ಜಾರ್ರಿಗೊಳಿಸಿದ್ದರು ನಾವು ಅಂದುಕೊಂಡಷ್ಟು ಪರಿಣಾಮಕಾರಿಯಾಗಿಲ್ಲ. ಈಗಿರುವ ಲಾಕ್ಡೌನ್ ವಿಫಲವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12ಕ್ಕೆ ಮುಗಿಯಲಿದ್ದು, ಆ ಬಳಿಕ ಯಡಿಯೂರಪ್ಪರೊಂದಿಗೆ ಚರ್ಚಿಸಿ ಕರ್ಫ್ಯೂ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕಾರಣ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಓಡಾಟ ನಡೆಯುತ್ತಿದ್ದು, ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಹಾಗಾಗಿ ಕಟ್ಟು ನಿಟ್ಟಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು" ಎಂದು ಲಾಕ್ಡೌನ್ ಜಾರಿ ಬಗ್ಗೆ ಸುಳಿವು ನೀಡಿದ್ದಾರೆ.
ಮೇ 15ರ ನಂತರ ನಮಗೆ ಕೊರೊನಾ ಲಸಿಕೆ ಬರಲಿದ್ದು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ಇನ್ನು "ಕೊರೊನಾ ನಿಯಂತ್ರಣಕ್ಕಾಗಿ ಹಿರಿಯ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿರುವುದು ನನಗೆ ಆನೆ ಬಲ ಬಂದಂತಾಗಿದೆ" ಎಂದು ಹೇಳಿದ್ದಾರೆ.