ಬೆಂಗಳೂರು, ಮೇ 06 (DaijiworldNews/MS): ರಾಜ್ಯದಲ್ಲಿ ಕೊರೊನಾದ ಬಲವಾದ ಎರಡನೇ ಅಲೆಯನ್ನು ನಿಯಂತ್ರಿಸಲು ಹಾಗೂ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಸೋಂಕಿನ ಕೊಂಡಿಯನ್ನು ಕತ್ತರಿಸಲು ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಕೊರೊನಾದಿಂದ ರಾಜ್ಯದ ಪರಿಸ್ಥಿತಿ ಗಂಭೀರವಾಗಿದೆ. ಮುಂಬೈಯಲ್ಲೂ ಲಾಕ್ ಡೌನ್ ನಿಂದಲೇ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿದೆ ಹೀಗಾಗಿ ಕರ್ನಾಟಕದಲ್ಲೂ ವಿಶೇಷವಾಗಿ ಲಾಕ್ ಡೌನ್ ಮಾಡುವ ಬಗ್ಗೆ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಪ್ರಥಮ ಆದ್ಯತೆಯಾಗಿ ಜನರ ಜೀವ ಉಳಿಸುವುದು ಹೀಗಾಗಿ ಲಾಕ್ ಡೌನ್ ಪರಿಗಣಿಸಬೇಕು. ಪ್ರಧಾನಿಯವರು ಸಲಹೆಯಂತೆ ರಾಜ್ಯಗಳೇ ಪರಿಗಣಿಸುವ ಮೂಲಕ ಅವರು ಹೇಳಿದಂತೆ ಮುಂದುವರೆಯಬೇಕು ಎಂದು ಸಲಹೆ ನೀಡಿದ್ದರೆ.
ಸಚಿವ ಪಿಯೂಶ್ ಗೋಯಲ್ ಅವರ ಜತೆ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಬುಧವಾರ ಚರ್ಚಿಸಿದ್ದು , ಇಲ್ಲಿನ ಆಕ್ಸಿಜನ್ ಇಲ್ಲಿಗೆ ಬೇಕು ಎಂದು ಒತ್ತಾಯಿಸಿದ್ದೇನೆ. ಮಾತ್ರವಲ್ಲದೆ ಆಮ್ಲಜನಕ ಪೂರೈಕೆ ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದಾರೆ. ಇವತ್ತು 975 ಮೆಟ್ರಿಕ್ ಟನ್ ಆಕ್ಸಿಜನ್ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.