ಕೊಲ್ಕತ್ತಾ, ಮೇ. 06 (DaijiworldNews/HR): ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಘೋಷಣೆಯ ಬಳಿಕ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಎಲ್ಲರಿಗೂ 2 ಲಕ್ಷ ರೂ. ಕೊಡಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಘೋಷಿಸಿದ್ದಾರೆ.
ಹಿಂಸಾಚಾರದಲ್ಲಿ ಮೃತಪಟ್ಟಿರುವ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಬಂಗಾಳ ಮುಖ್ಯಮಂತ್ರಿ, "ಪಕ್ಷದ ಬಣ್ಣಗಳು ಅಥವಾ ಧರ್ಮ ಅಥವಾ ಜಾತಿ ನೋಡದೆ ಕೊಲ್ಲಲ್ಪಟ್ಟ ಪ್ರತಿಯೊಬ್ಬರಿಗೂ ನಾವು ಪರಿಹಾರ ನೀಡಲಿದ್ದೇವೆ" ಎಂದಿದ್ದಾರೆ,.
ಬಂಗಾಳದಲ್ಲಿ ನಡೆದ ಹಿಂಸಾಚಾರದಲ್ಲಿ ಈವರೆಗೆ ಕನಿಷ್ಠ 14 ಬಿಜೆಪಿ ಕಾರ್ಯಕರ್ತರು ಬಲಿಯಾಗಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನಿನ್ನೆ ಆರೋಪಿಸಿದ್ದು, ಹಿಂದಿನ ದಿನ, ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಮತದಾನದ ನಂತರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾಗ ಪಶ್ಚಿಮ ಮಿಡ್ನಾಪೋರ್ ಜಿಲ್ಲೆಯ ಪಂಚಕುರಿ ಗ್ರಾಮದಲ್ಲಿ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ ಮುರಲೀಧರನ್ ಅವರ ಕಾರನ್ನು ಧ್ವಂಸಗೊಳಿಸಲಾಯಿತು. ಮುಲಾಲೀಧರನ್ ತಮ್ಮ ಬೆಂಗಾವಲು ಮೇಲಿನ ದಾಳಿಯ ಹಿಂದೆ 'ಟಿಎಂಸಿ ಗೂಂಡಾಗಳು' ಇದ್ದಾರೆ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ಇನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ 213 ಸ್ಥಾನಗಳನ್ನು ಗೆದ್ದಿದ್ದು, 294 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯು 77 ಸ್ಥಾನಗಳನ್ನು ಗಳಿಸಿದೆ.