ಬೆಂಗಳೂರು, ಮೇ 06 (DaijiworldNews/SM): ರಾಜ್ಯದಲ್ಲಿ ಎಷ್ಟೇ ನಿಯಂತ್ರಣ ಕ್ರಮಗಳನ್ನು ನಡೆಸಿದರೂ, ಎಷ್ಟೇ ಮೀಟಿಂಗ್ ನಡೆಸಿದರೂ ಕೊರೋನಾ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಗುರುವಾರದಂದು ರಾಜ್ಯದಲ್ಲಿ 49,058 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ 328 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಇಂದಿನ ಸಾವಿನ ಪ್ರಕರಣಗಳ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಇಲ್ಲಿಯ ತನಕ 17,90,104 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಇಂದು 18943 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 12,55,797ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 5,17,075 ಸಕ್ರೀಯ ಪ್ರಕರಣಗಳಿವೆ.
ಇನ್ನು ಬೆಂಗಳೂರಿನಲ್ಲಿ ಇಂದು 23,706 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8,87,086ಕ್ಕೆ ಏರಿಕೆಯಾಗಿದೆ.