ತಿರುವನಂತಪುರ, ಮೇ.07 (DaijiworldNews/PY): ಕೊರೊನಾ ಕಾರಣದಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಈ ಹಿನ್ನೆಲೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮಹತ್ವದ ಆದೇಶ ಹೊರಡಿಸಿದ್ದು, ಮುಂದಿನ ಎರಡು ತಿಂಗಳ ಕಾಲ ಬಾಕಿಯಿರುವ ವಿದ್ಯುತ್ ಹಾಗೂ ನೀರಿನ ಬಿಲ್ ವಸೂಲಿ ಮಾಡದಂತೆ ತಿಳಿಸಿದ್ದಾರೆ.
"ಬ್ಯಾಂಕಿಂಗ್ ವಲಯವೂ ಕೂಡಾ ಸಾಲಗಾರರ ಬಳಿ ವಸೂಲಿಗೆ ತೆರಳದಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಔಷಧ ಹಾಗೂ ಇನ್ನಿತರ ಸಾಮಾಗ್ರಿಗಳ ಖರೀದಿಗೆ ಮನೆಯಿಂದ ಹೊರಹೋಗಲಾಗದ ಅಸಹಾಯಕರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಔಷಧಿಗಳನ್ನು ತರಿಸಿಕೊಳ್ಳಬಹುದು" ಎಂದಿದ್ದಾರೆ.
"ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ" ಎಂದು ಹೇಳಿದ್ದಾರೆ.