ನವದೆಹಲಿ, ಮೇ 07 (DaijiworldNews/MB) : ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ಪ್ರಮಾಣ ತೀವ್ರ ಪ್ರಮಾಣವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ ಸೋಂಕು ಪ್ರಕರಣ ಹಾಗೂ ಸೋಂಕಿತರ ಸಾವಿನ ಪ್ರಕರಣದಲ್ಲಿ ದಾಖಲೆ ಸೃಷ್ಟಿಸಿದೆ. ಶುಕ್ರವಾರ ದೇಶದಲ್ಲಿ ಮತ್ತೆ ದಾಖಲೆಯ 4,14,188 ಕೊರೊನಾ ಪ್ರಕರಣಗಳು ದಾಖಲಿರುವುದು ಮಾತ್ರವಲ್ಲದೆ 3,915 ಮಂದಿ ಸಾವನ್ನಪ್ಪಿದ್ದಾರೆ.
ಗುರುವಾರ 4,12,262 ಹೊಸ ಕೊರೊನಾ ಪ್ರಕರಣಗಳು ಧೃಡಪಟ್ಟಿದ್ದು, 3,980 ಮಂದಿ ಮೃತಪಟ್ಟಿದ್ದರು. ಇಂದಿನ ಕೊರೊನಾ ಸೋಂಕು ಪ್ರಕರಣಗಳು ಸೇರಿ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2.14 ಕೋಟಿಗೆ ಏರಿಕೆಯಾಗಿದೆ. ಹಾಗೆಯೇ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯೂ 2,34,083ಕ್ಕೆ ಏರಿಕೆ ಕಂಡಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ದೇಶದ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆಯೂ ಕೂಡಾ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 36,45,164 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಏತನ್ಮಧ್ಯೆ ಕೊರೊನಾ ಸೋಂಕಿನಿಂದ ಗುಣಮುಖರಾಗುವ ಸಂಖ್ಯೆಯೂ ಕೂಡಾ ಉತ್ತಮವಾಗಿದೆ. ಕಳೆದ 24 ಗಂಟೆಗಳಲ್ಲಿ 3,31,507 ಮಂದಿ ಸೋಂಕಿತರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 1,76,12,351ಕ್ಕೆ ಏರಿಕೆ ಕಂಡಿದೆ.
ಇನ್ನು ಈ ನಡುವೆ ಕಳೆದ 24 ಗಂಟೆಗಳಲ್ಲಿ 18,26,490 ಮಂದಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೂ ಒಟ್ಟು 29,86,01,699 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಹಾಗೆಯೇ ದೇಶದಲ್ಲಿ ಲಸಿಕೆ ಅಭಿಯಾನ ಆರಂಭವಾಗಿ ಈವರೆಗೂ 16,49,73,058 ಮಂದಿಗೆ ಲಸಿಕೆ ನೀಡಲಾಗಿದೆ.