ನವದೆಹಲಿ, ಮೇ.07 (DaijiworldNews/HR): ಭಾರತದಲ್ಲಿ ಕೊರೊನಾದಿಂದ ಸಾವು ನೋವುಗಳ ಸಂಕ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಕಾರ್ಯಕ್ಕಾಗಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅಭಿಯಾನವೊಂದನ್ನು ಘೋಷಣೆ ಮಾಡಿದ್ದಾರೆ.
ಈ ಕುರಿತು ಇನ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿರುವ ವಿರಾಟ್ ಕೊಹ್ಲಿ, ಭಾರತದಲ್ಲಿನ ಪ್ರಸ್ತುತ ಕೊರೊನಾ ಪರಿಸ್ಥಿತಿಯ ಬಗ್ಗೆ ಕೊಹ್ಲಿ ಹಾಗೂ ಅನುಷ್ಕಾ ಕಳವಳ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಕ್ಕಾಗಿ ನಿಧಿ ಸಂಗ್ರಹ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಇನ್ನು ಕೊರೊನಾವನ್ನು ನಿಯಂತ್ರಿಸಬೇಕಾದರೆ ನಾವೆಲ್ಲ ಒಗ್ಗೂಡುವ ಅಗತ್ಯವಿದ್ದು, ನಮ್ಮ ದೇಶಕ್ಕಾಗಿ ನೆರವು ನೀಡಬೇಕಾಗಿದ್ದು, ಕೊರೊನಾ ಪರಿಹಾರಕ್ಕಾಗಿ ನಿಧಿ ಸಂಗ್ರಹ ಅಭಿಯಾನವನ್ನು ಘೋಷಿಸಿದ್ದೇವೆ. ನಮ್ಮ ಬೆಂಬಲಕ್ಕೆ ನೀವು ನಮ್ಮ ಅಭಿಯಾನದಲ್ಲಿ ಜೊತೆಯಾಗಿ ಎಂದು ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನವಿ ಮಾಡಿಕೊಂಡಿದ್ದಾರೆ.