ನವದೆಹಲಿ, ಮೇ.07 (DaijiworldNews/PY): ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ವೈದ್ಯಕೀಯ ಆಕ್ಸಿಜನ್ ಪ್ರಮಾಣವನ್ನು 965 ಮೆಟ್ರಿಕ್ ಟನ್ನಿಂ 1,200 ಟನ್ಗಳಿಗೆ ಹೆಚ್ಚಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಸುಪ್ರೀಂಕೋರ್ಟ್ನಲ್ಲಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಡಿ.ವೈ ಚಂದ್ರಚೂಡ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
"ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ನಾನು ತಡೆ ನೀಡುವುದಿಲ್ಲ. ಹೈಕೋರ್ಟ್ನ ಆದೇಶದ ನಡುವೆ ನಾನು ಪ್ರವೇಶಿಸುವುದಿಲ್ಲ. ಹೈಕೋರ್ಟ್ ನೀಡಿರುವ ಆದೇಶ ತಪ್ಪಲ್ಲ. ನಾಲ್ಕು ದಿನಗಳಲ್ಲಿ ರಾಜ್ಯದ ಮನವಿಯನ್ನು ಪರಿಗಣಿಸಬೇಕು" ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕರ್ನಾಟಕ ಕೇಳಿದಷ್ಟು ಆಕ್ಸಿಜನ್ ಪೂರೈಕೆ ಮಾಡುವುದು ಕಷ್ಟ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಸರ್ಕಾರ ರಾಜ್ಯ ಹೈಕೋರ್ಟ್ ಕೇಳಿದಷ್ಟು ಆಕ್ಸಿಜನ್ ಪೂರೈಕೆ ಮಾಡಲು ಆದೇಶ ನೀಡಿತ್ತು.
"ಕರ್ನಾಟಕ ಜನತೆಯನ್ನು ತೊಂದರೆ ಒಳಪಡಿಸಲು ಸಾಧ್ಯವಿಲ್ಲ. ಮನವಿಯನ್ನು ಪರಿಗಣಿಸುವ ತನಕ ತಕ್ಷಣವೇ ಜಾರಿಗೆ ಬರುವಂತೆ ದಿನಕ್ಕೆ 1,200 ಮೆಟ್ರಿಕ್ ಟನ್ಗೆ ಹೆಚ್ಚಿಸಬೇಕು" ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ.