ಮುಂಬೈ, ಮೇ.07 (DaijiworldNews/HR): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್ಸಿಬಿ) ಅಧಿಕಾರಿಗಳು ಗೋವಾದಲ್ಲಿ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಹೇಮಾಲ್ ಷಾ ಎಂದು ಗುರುತಿಸಲಾಗಿದೆ.
ಎನ್ಸಿಬಿಯು ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದ ತನಿಖೆ ನಡೆಸುವ ವೇಳೆ ಹೇಮಾಲ್ ಷಾ ಹೆಸರು ಕೇಳಿಬಂದಿತ್ತು.
ಇನ್ನು ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಗೋವಾದಲ್ಲಿ ಹೇಮಾಲ್ ಷಾಗೆ ಬಲೆ ಬೀಸಿ ಬಂಧಿಸಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವಿನ ಬಳಿಕ ಚಂದನವನದಲ್ಲಿ ಮಾದಕ ವಸ್ತುಗಳ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ನಂತರ ಎನ್ಸಿಬಿ ತನಿಖೆ ಆರಂಭಿಸಿತ್ತು.