ಬೆಂಗಳೂರು, ಮೇ 07 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಳವಾಗಿದ್ದು, ಶುಕ್ರವಾರ 48,781 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಶುಕ್ರವಾರ ಬರೋಬ್ಬರಿ 592 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದಿನ ಪಾಸಿಟಿವ್ ಪ್ರಕರಣಗಳ ಮೂಲಕ ರಾಜ್ಯದಲ್ಲಿ ಒಟ್ಟು 18,38,885 ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ. ಶುಕ್ರವಾರದಂದು 28,623 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 12,84,420ಕ್ಕೆ ತಲುಪಿದೆ. ರಾಜ್ಯದಲ್ಲಿ ಪ್ರಸ್ತುತ 5,36,641 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 17,804 ಮಂದಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.