ಬೆಂಗಳೂರು, ಮೇ 08 (DaijiworldNews/MB) : ''ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ ಶೇ. 70 ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು'' ಎಂದು ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.70 ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ ಶೇ.30 ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು'' ಎಂದು ಹೇಳಿದ್ದಾರೆ.
ಹಾಗೆಯೇ ''ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು'' ಎಂದು ಕೂಡಾ ತಿಳಿಸಿದ್ದಾರೆ.