ಚಂಡೀಗಢ, ಮೇ. 08 (DaijiworldNews/HR): ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯದ ಲಾಕ್ಡೌನ್ ವಿಧಿಸಿರುವ ವಿರುದ್ಧ ರೈತರು ಶನಿವಾರ ಪಂಜಾಬ್ನ ಅನೇಕ ಸ್ಥಳಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ನ 32 ರೈತ ಸಂಘಗಳು ರಾಜ್ಯದಲ್ಲೂ ಲಾಕ್ಡೌನ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಘೋಷಿಸಿತ್ತು.
ಇನ್ನು ಮೊಗಾ, ಪಟಿಯಾಲ, ಅಮೃತಸರ, ಅಜ್ನಾಲಾ ಸೇರಿದಂತೆ ರಾಜ್ಯದ ಇತರ ಸ್ಥಳಗಳಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ನಿವಾರಣರಗೆ ಲಾಕ್ಡೌನ್ ಪರಿಹಾರವಲ್ಲ. ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಪ್ರತಿಭಟನಾ ಕಾರರು ಆರೋಪಿಸಿದ್ದಾರೆ.