ಶಿವಮೊಗ್ಗ, ಮೇ 09 (DaijiworldNews/MB) : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹುಟ್ಟೂರಾದ ಶಿವಮೊಗ್ಗ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯು ಸಾವನ್ನಪ್ಪಿದ್ದು, ವೆಂಟಿಲೇಟರ್ ದೊರೆಯದೆ ಇರುವುದೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.
ಕೋವಿಡ್ ಪಾಸಿಟಿವ್ ಆಗಿದ್ದ ಶಿಕಾರಿಪುರದ ಆನಂದ್ (46) ಸಾವನ್ನಪ್ಪಿದ ವ್ಯಕ್ತಿ.
ಕೊರೊನಾ ಸೋಂಕು ದೃಢಪಟ್ಟ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸೌಲಭ್ಯ ಲಭ್ಯವಿಲ್ಲದ ಕಾರಣ ಅವರು ಸುಮಾರು ಎರಡು ಗಂಟೆಗಳ ಕಾಲ ಉಸಿರಾಟ ತೊಂದರೆಯಲ್ಲಿ ಬಳಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮೃತ ವ್ಯಕ್ತಿಯಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಕ್ಸಿಜನ್ನ ಅವಶ್ಯಕತೆ ಇತ್ತು ಎಂದು ಹೇಳಲಾಗಿದೆ. ಆದರೆ ವೈದ್ಯರು ಆತನನ್ನು ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡುವ ಬದಲಾಗಿ ಜನರಲ್ ವಾರ್ಡ್ನಲ್ಲಿ ದಾಖಲಿಸಿದ್ದರು ಎಂಬ ಆರೋಪವೂ ಕೂಡಾ ಕೇಳಿ ಬಂದಿದೆ.