ನವದೆಹಲಿ, ಮೇ.09 (DaijiworldNews/PY): ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,22,96,414 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 4,092 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೆ 2,42,362 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 1,83,17,404 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 37,36,648 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.