ನವದೆಹಲಿ, ಮೇ. 09 (DaijiworldNews/HR): ಮುಖ್ಯಮಂತ್ರಿ ಸ್ಥಾನಕ್ಕೆ ರವಿವಾರದಂದು ಸರ್ಬಾನಂದ ಸೋನೋವಾಲ್ ಅವರು ರಾಜೀನಾಮೆ ನೀಡಿದ್ದು, ಅಸ್ಸಾಂನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ.
ಸರ್ಬಾನಂದ ಸೋನೊವಾಲ್ ಅವರು ಇಂದು ಗವರ್ನರ್ ಜಗದೀಶ್ ಮುಖಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ
ಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿಗಗಳಾಗಿರುವ ಸರ್ಬಾನಂದ ಸೋನೋವಾಲ್ ಮತ್ತು ಹಿಮಂತ್ ಬಿಸ್ಕಾ ಶರ್ಮಾ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ನಾಯಕರಿಬ್ಬರೂ ಬಿಜೆಪಿ ಹೈಕಮಾಂಡ್ನೊಂದಿಗೆ ಸುಮಾರು 4 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಚರ್ಚೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಸ್ಕಾ ಶರ್ಮಾ, "ರವಿವಾರ ಗುವಾಹಟಿಯಲ್ಲಿ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಮುಂದಿನ ಸರ್ಕಾರ ಕುರಿತು ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ" ಎಂದರು.
ಇನ್ನು ಇತ್ತಿಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಬಿಜೆಪಿ 60 ಕ್ಷೇತ್ರಗಳಲ್ಲಿ ಹಾಗೂ ಮಿತ್ರಪಕ್ಷಗಳಾದ ಎಜಿಪಿ 9 ಕ್ಷೇತ್ರಗಳಲ್ಲಿ, ಯುಪಿಪಿಎಲ್ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.