ಗುವಾಹಟಿ, ಮೇ.09 (DaijiworldNews/PY): ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ (52) ಅವರು ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
"ಮೇ 9ರ ರವಿವಾರ ಗುವಾಹಟಿಯಲ್ಲಿ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ" ಎಂದು ಕೇಂದ್ರ ಸಚಿವ ಬಿಜೆಪಿ ನಾಯಕ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ಬಿಜೆಪಿಯ ಅಸ್ಸಾಂ ಶಾಸಕಾಂಗ ಪಕ್ಷವು ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೂ ಮುನ್ನ ರಾಜ ಭವನದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರನ್ನು ಭೇಟಿಯಾದ ಸರ್ಬಾನಂದ ಸೊನೊವಾಲ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಮೇ 10ರ ಸೋಮವಾರದಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಶಾಸಕಾಂಗ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.