ನವದೆಹಲಿ, ಮೇ 09 (DaijiworldNews/MB) : ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಸೋಂಕು ಹೆಚ್ಚಳ ವಿಚಾರವಾಗಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ.
ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಫೋನ್ ಮೂಲಕ ಮಾತನಾಡಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಸಲಹೆ ನೀಡುತ್ತಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿದ್ದರು.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಜೊತೆ ಫೋನ್ ಕರೆಯಲ್ಲಿ ಮಾತನಾಡಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.