ಬೆಳಗಾವಿ, ಮೇ. 09 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿರುವುದು ಒಳ್ಳೆಯ ನಿರ್ಧಾರ. ಆದರೆ, ಆಕ್ಸಿಜನ್, ಲಸಿಕೆ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ತಾರತಮ್ಯ ಸರಿಯಲ್ಲ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, "ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆ ತುಂಬಾ ಇದ್ದು, ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರಿಗೆ ಸಮಸ್ಯೆ ಆಗಿದೆ" ಎಂದರು.
ಇನ್ನು ಆಸ್ಪತ್ರೆಗಳಲ್ಲಿ ಕೇವಲ 50 ರಷ್ಟು ಆಕ್ಸಿಜನ್ ಇದ್ದು, ಹೆಚ್ಚಿನ ಆಕ್ಸಿಜನ್ ಪೂರೈಸುವ ಉದ್ದೇಶದಿಂದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದ್ದು, ಕರ್ನಾಟಕದಲ್ಲಿನ ಸಮಸ್ಯೆ ಬಗ್ಗೆ 25 ಸಂಸದರು ಕೇಂದ್ರದಲ್ಲಿ ಧ್ವನಿ ಎತ್ತಿ ಈ ಸಮಸ್ಯೆ ನೀಗಿಸಲು ಇಲ್ಲಿನ ಸಂಸದರು ಹೋರಾಟ ಮಾಡಬೇಕು" ಎಂದು ಹೇಳಿದ್ದಾರೆ.