ಪೂಂಚ್, ಮೇ.09 (DaijiworldNews/PY): ಭಾರತೀಯ ಸೇನಾಪಡೆ ಹಾಗೂ ಕಾಶ್ಮೀರದ ಪೊಲೀಸರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆ ಸಂದರ್ಭ 19 ಗ್ರೆನೇಡ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರವಿವಾರ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಫಾಗ್ಲಾ ಎನ್ನುವ ಪ್ರದೇಶದಲ್ಲಿ ಸ್ಪೋಟಕಗಳು ಪತ್ತೆಯಾಗಿವೆ ಎಂದು ವರದಿಗಳು ವಿವರಿಸಿವೆ.
"ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಒಟ್ಟು 19 ಗ್ರೆನೇಡ್ಗಳು ಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.