ಲಕ್ನೋ, ಮೇ.09 (DaijiworldNews/PY): ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಲಾಕ್ಡೌನ್ ಅನ್ನು ಮೇ 17ರ ತನಕ ವಿಸ್ತರಿಸಿ ರವಿವಾರ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ನವನೀತ್ ಸೆಹಗಲ್ ಈ ಬಗ್ಗೆ ಮಾಹಿತಿ ನೀಡಿದ್ದು, "ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಮೇ 10ರಂದು ಬೆಳಗ್ಗೆ 7 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಹಾಗಾಗಿ ಮೇ 17ರ ಬೆಳಗ್ಗಿನವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲು ಆದೇಶ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
"ಲಾಕ್ಡೌನ್ ಜಾರಿ ಮಾಡಿರುವ ಕಾರಣ ಕೊರೊನಾ ಸೋಂಕು ಸರಪಳಿಯನ್ನು ತುಂಡರಿಸಲು ನೆರವಾಗಿದ್ದು, ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದ್ದು, ಲಾಕ್ಡೌನ್ ಅನ್ನು ಮತ್ತಷ್ಟು ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ" ಎಂದಿದ್ದಾರೆ.
"ಲಾಕ್ಡೌನ್ ಸಂದರ್ಭ ವೈದ್ಯಕೀಯ ಸೇವೆ ಸಂಬಂಧಿಸಿದ ಚಟುವಟಿಕೆಗಳು ಸೇರಿದಂತೆ ಕೈಗಾರಿಕೆ ಹಾಗೂ ಲಸಿಕೆ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ" ಎಂದು ತಿಳಿಸಿದ್ದಾರೆ.