ನವದೆಹಲಿ, ಮೇ.10 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,66,161 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿಗೆ 3,754 ಮಂದಿ ಸಾವನ್ನಪ್ಪಿದ್ದು, ಒಟ್ಟು 2,46,116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
3,53,818 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 1,86,71,222 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಸದ್ಯ 37,45,116 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.