ರಾಂಚಿ, ಮೇ.10 (DaijiworldNews/PY): "ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ" ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಟಾಟಾನಗರದಿಂದ ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ" ಎಂದಿದ್ದಾರೆ.
"ಕರ್ನಾಟಕಕ್ಕೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಆಕ್ಸಿಜನ್ ಅನ್ನು ಪೂರೈಕೆ ಮಾಡುತ್ತಿದೆ. ಟಾಟಾನಗರದಿಂದ ಒಟ್ಟು ಆರು ಆಕ್ಸಿಜನ್ ಕಂಟೈನರ್ಗಳು ರಾಜ್ಯಕ್ಕೆ ಆಗಮಿಸುತ್ತಿವೆ" ಎಂದು ಹೇಳಿದ್ದಾರೆ.
"ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಹೆಚ್ಚಿನ ಅನುಕೂಲವಾಗಲಿದೆ" ಎಂದು ತಿಳಿಸಿದ್ದಾರೆ.