ಕೋಲ್ಕತ್ತಾ, ಮೇ.10 (DaijiworldNews/PY): ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿರುವ ಸಿಎಂ ಮಮತಾ ಬ್ಯಾನರ್ಜಿ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಸೋಮವಾರ 43 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೋಲ್ಕತ್ತಾದ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಪ್ರಮಾಣ ವಚನ ಬೋಧಿಸಿದರು. ಪ್ರಮಣಾ ವಚನ ಸ್ವೀಕರಿಸಿದವರ ಪೈಕಿ 24 ಮಂದಿ ಸಂಪುಟ ದರ್ಜೆ ಸಚಿವರಾಗಿದ್ದರೆ, 10 ಮಂದಿ ಸ್ವತಂತ್ರ ಖಾತೆ ಸಚಿವರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಟಿಎಂಸಿ ನಾಯಕರಾದ ಅಮಿತ್ ಮಿಶ್ರಾ, ಬ್ರತ್ಯಾ ಬಸು ಹಾಗೂ ರತಿನ್ ಘೋಷ್ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಮಾಣ ವಚನ ಸ್ವೀಕರಿಸಿದರು.
ಸೋಮವಾರ ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗುವ ನಿರೀಕ್ಷೆ ಇದೆ.