ನವದೆಹಲಿ, ಮೇ. 10 (DaijiworldNews/HR): ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯು ಇಂದು ನಡೆದಿದ್ದು, ಅದರಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಭೆಯು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜೂನ್ 23ರಂದು ಎಐಸಿಸಿ ಅಧ್ಯಕ್ಷ ಸ್ಥಾನ ಆಯ್ಕೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ'
ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ರಾಹುಲ್ ಗಾಂಧಿ 2019ರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಚುನಾವಣೆ ಮೂಲಕ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.