ಮೈಸೂರು, ಮೇ. 10 (DaijiworldNews/HR): ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ , ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್ ಅವರೊಂದಿಗೆ ಮಾತನಾಡಲಾಗಿದೆ" ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು," ಜೆ.ಎಸ್.ಎಸ್.ನಲ್ಲಿ 417 ಹಾಸಿಗೆಗಳನ್ನು ಕೊಟ್ಟಿದ್ದು, ಇದರಲ್ಲಿ 100 ಆಕ್ಸಿಜನ್ ಸಹಿತ ಹಾಸಿಗೆಗಳಿದ್ದು, ಈ ಆಕ್ಸಿಜನೇಟೆಡ್ ಹಾಸಿಗೆಗಳ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವಂತೆ ಕಳೆದ ವಾರ ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಕೇಳಿದ್ದು, ಅವರು ಸ್ಪಂದಿಸಿದ್ದಾರೆ" ಎಂದರು.
ಇನ್ನು "ಆಕ್ಸಿಜನ್ ಹಾಸಿಗೆ ಹೆಚ್ಚಿಸಿದರೆ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸುವಂತೆ ಕೇಳಿದ್ದು, ಇದರ ಉಸ್ತುವಾರಿ ನೋಡಿಕೊಳ್ಳುವ ಪ್ರತಾಪ್ ಸಿಂಹ ಅವರು ಅದರಂತೆ ಕ್ರಮವಹಿಸುವರು" ಎಂದಿದ್ದಾರೆ.
ಆಕ್ಸಿಜನ್ ಕೊರತೆ ನೀಗಿಸಲು ಜೆಎಸ್ಎಸ್ ಆಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಹೆಚ್ಚಿಸಲು ಗುಜರಾತ್ನ ಕಂಪನಿಯೊಂದಿಗೆ ಜೆಎಸ್ಎಸ್ ಒಡಂಬಡಿಕೆ ಮಾಡಿಕೊಂಡಿದೆ" ಎಂದು ಮಾಹಿತಿ ನೀಡಿದ್ದಾರೆ.