ಬೆಂಗಳೂರು, ಮೇ 10 (DaijiworldNews/SM): ಸೋಮವಾರದಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಇಳಿಕೆಯಾಗಿದ್ದು, 39305 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಬರೋಬ್ಬರಿ 596 ಮಂದಿ ಸೋಮವಾರದಂದು ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಮೇ ೧೦ರ ಸೋಮವಾರದಂದು ರಾಜ್ಯದಲ್ಲಿ 32,188 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಆ ಮೂಲಕ ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು 13,83,285 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇನ್ನು ರಾಜ್ಯದಲ್ಲಿ ಪ್ರಸ್ತುತ 5,71,006 ಮಂದಿ ಕೋವಿಡ್ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ರಾಜ್ಯದಲ್ಲಿ 19,73,683 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು 19,372 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಸೋಮವಾರವೂ ಕೂಡ ಬೆಂಗಳೂರು ನಗರದಲ್ಲೇ ಅತ್ಯಧಿಕ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರದಲ್ಲಿ 16,747 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 374 ಮಂದಿ ಸೋಮವಾರದಂದು ಸೋಂಕಿಗೆ ಬಲಿಯಾಗಿದ್ದಾರೆ.