ಬೆಂಗಳೂರು, ಮೇ.11 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗಿ ಅನೇಕ ಸಾವುಗಳು ಸಂಭವಿಸುತ್ತಿದ್ದರೂ, ಈ ನಡುವೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಗಂಭೀರ ಪ್ರಯತ್ನ ನಡೆಯುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಸಚಿವ ಬಸವರಾಜ ಬೊಮ್ಮಾಯಿ ನಾಯಕತ್ವ ಬದಲಾವಣೆಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, "ಇದು ಸತ್ಯಕ್ಕೆ ದೂರವಾದದ್ದು, ಆ ರೀತಿಯ ಯಾವುದೇ ಚರ್ಚೆ ನಮ್ಮ ಪಕ್ಷದಲ್ಲಿ ಈಗ ನಡೆದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ನಳಿನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, "ಕರ್ನಾಟಕದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಪ್ರಶ್ನೆ ಇಲ್ಲ. ಈಗ ಪಕ್ಷ, ಶಾಸಕರು, ಸಚಿವರಿಗೆ ಒಂದೇ ಕೆಲಸ, ಒಂದೇ ಕೆಲಸ, ಒಂದೇ ಗುರಿ- , " ಎಂದರು.
ಇನ್ನು "ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಸತ್ಯಕ್ಕೆ ದೂರವಾದ ಮಾತಾಗಿದ್ದು, ರವಿವಾರ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದೇನೆ. ರಾಜ್ಯದ ಕೊರೊನಾ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದ್ದೇವೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.