ನವದೆಹಲಿ, ಮೇ.11 (DaijiworldNews/HR): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 3,29,942 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಹೊಸದಾಗಿ 3,29,942 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸೋಂಕಿನಿಂದ 3,876 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 2,49,992 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 3,56,082 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 1,90,27,304 ಸೋಂಕಿತರು ಗುಣಮುಖರಾಗಿ ಅಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಸದ್ಯ 37,15,221 ಪ್ರಕರಣಗಳು ಸಕ್ರಿಯವಾಗಿವೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.