ಶ್ರೀನಗರ, ಮೇ.11 (DaijiworldNews/PY): ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಕೊಮೆರ್ನಾಗ್ ಪ್ರದೇಶದ ವೈಲೂನಲ್ಲಿ ಮಂಗಳವಾರ ಭದ್ರತಾ ಪಡೆಗಳ ಹಾಗೂ ಉಗ್ರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರ ಹತರಾಗಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡರಗಳು ಮಂಗಳವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇರೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ.
"ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಸದೆ ಬಡೆದಿದ್ದಾರೆ" ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.