ಬೆಂಗಳೂರು, ಮೇ.11 (DaijiworldNews/HR): ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದ್ದು ಅನೇಕ ದೇಶಗಳು ಸಹಾಯಕ್ಕಾಗಿ ಮುಂದೆ ಬಂದಿದ್ದು, ಇಂದು ಇದೇ ಮೊದಲ ಬಾರಿಗೆ ರೈಲಿನ ಮೂಲಕ ಬೆಂಗಳೂರಿಗೆ ಆಕ್ಸಿಜನ್ ಬಂದಿದೆ.
ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್ಗಳು ತಲುಪಿದ್ದು, ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್ಗಳು ಈಗ ವೈಟ್ಫೀಲ್ಡ್ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಬಂದು ತಲುಪಿದೆ.
ಇನ್ನು ಜಮ್ಶೆಡ್ಪುರದಿಂದ ಸೋಮವಾರ ಮುಂಜಾನೆ 3ಕ್ಕೆ ಹೊರಟಿದ್ದ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು 30 ಗಂಟೆಯಲ್ಲಿ ಬೆಂಗಳೂರು ತಲುಪಿದ್ದು, ಐಎಸ್ಒ ಕಂಟೇನರ್ ಮೂಲಕ ಒಟ್ಟು 17.50 ಸಾವಿರ ಲೀಟರ್ ಆಕ್ಸಿಜನ್ ತರಿಸಿಕೊಳ್ಳಲಾಗಿದೆ.