ಬೆಂಗಳೂರು, ಮೇ.11 (DaijiworldNews/HR): ಕರ್ನಾಟಕದಲ್ಲಿ ಮೇ.10 ರಿಂದ 24ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಧೆಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ಆದೇಶ ನೀಡಿದೆ.
ಈ ಕುರಿತು ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರ ಬರೆದಿದ್ದು, "ಸರ್ಕಾರವು ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮೇ 10 ರಿಂದ 24ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸಬೇಕು".
ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ(ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಟೀನ್ಗಳಲ್ಲಿ ಮಾರ್ಗಸೂಚಿಗಳನ್ವಯ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ನಿರ್ದೇಶಿಸಿದ್ದು, ಈ ನಿಟ್ಟಿನಲ್ಲಿ ಆಹಾರ ಸೇವಿಸುವ ಜನರ ಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಿರ್ವಹಿಸುವುದು ಹಾಗೂ ಯೋಜನಾ ನಿರ್ದೇಶಕರು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಪರಿವೀಕ್ಷಣೆ ಮಾಡಬೇಕು" ಎಂದು ಹೇಳಿದೆ.