ಬೆಂಗಳೂರು, ಮೇ 11 (DaijiworldNews/MB) : ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ವಿನೂತನ ಆಕ್ಸಿಬಸ್ ಸೇವೆಗೆ ಮಂಗಳವಾರ ಮೇ. 11 ರಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
''ತುರ್ತು ಸಂದರ್ಭಗಳಲ್ಲಿ ಕೊರೊನಾ ರೋಗಿಗಳಿಗೆ ಸಹಾಯ ಮಾಡುವ ವಿನೂತನ ಆಕ್ಸಿಬಸ್ ಸೇವೆ ಪ್ರಾರಂಭಿಸಲಾಯಿತು. ಈ ತಾತ್ಕಾಲಿಕ ಆಕ್ಸಿಬಸ್ನಲ್ಲಿ 8 ರೋಗಿಗಳು ಸೇವೆ ಪಡೆಯಬಹುದು. ಅಂತಹ 20 ಘಟಕಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಸ್ಥಾಪಿಸಲಾಗುವುದು'' ಎಂದು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಾದ್ಯಂತ ಹೆಚ್ಚಿನ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಕೂಡಾ ಹೇಳಿದ್ದಾರೆ.