ತೆಲಂಗಾಣ, ಮೇ.11 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಮೇ 12ರಿಂದ ಮೇ 12ರಿಂದ ರಾಜ್ಯವ್ಯಾಪಿ ಲಾಕ್ಡೌನ್ ಘೋಷಿಸಿದೆ.
"ಮೇ 12ರಿಂದ 22ರವರೆಗೆ ಲಾಕ್ಡೌನ್ ಜಾರಿಯಾಗಲಿದ್ದು, ತೆಲಂಗಾಣದಾದ್ಯಂತ ಪ್ರತಿದಿನ ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಎಲ್ಲಾ ಚಟುವಟಿಕೆಗಳನ್ನ ಅನುಮತಿಸಲಾಗುತ್ತದೆ. ಆ ನಂತರ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗುವುದು" ಎಂದು ಸರ್ಕಾರ ತಿಳಿಸಿದೆ.
ಇನ್ನು ತೆಲಂಗಾಣದ ಉನ್ನತ ಅಧಿಕಾರಿಗಳು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಸುತ್ತಿದ್ದು, ಸಂಪೂರ್ಣ ಲಾಕ್ ಡೌನ್ ಪರ ಮತ್ತು ವಿರುದ್ಧ ವಾದಗಳನ್ನು ಚರ್ಚಿಸುತ್ತಿದ್ದಾರೆ ಎಂದು ತೆಲಂಗಾಣ ಸಿಎಂಒ ತಿಳಿಸಿದೆ.