ಬೆಂಗಳೂರು, ಮೇ.11 (DaijiworldNews/HR): ಖಾಸಗಿ ವಾಹಿನಿಯ ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಗಾಯಕ, ಪೊಲೀಸ್ ಸುಬ್ರಮಣಿ ಪತ್ನಿ ಅವರಿಗೆ ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೆ ನಿಧನರಾಗಿದ್ದಾರೆ ಎಂಬ ಸುದ್ದಿ ಹರಿಡಿದ ಬೆನ್ನಲ್ಲೇ ಆಕೆ ಕೊರೊನಾದಿಂದ ಸಾವನ್ನಪ್ಪಿಲ್ಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹೊರಗೆ ಬಿದ್ದಿದೆ.
ಇತ್ತೀಚೆಗೆ ಕೋಲಾರಕ್ಕೆ ಹೋಗಿದ್ದಾಗ ಸುಬ್ರಮಣಿ ಅವರ ಪತ್ನಿ ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಕೂಡಲೇ ಅವರನ್ನು ಹೊಸಕೋಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಸಿಕ್ಕಿದೆ.
ಇನ್ನು ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಕೋಲಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಾಗಿ ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದ ಸುಬ್ರಮಣಿ ಅವರಿಗೆ ಪತ್ನಿ ಉಳಿಸಿಕೊಳ್ಳಲು ಸಾಧ್ಯವಾಗದೆ ಕೊನೆಗೆ ಹೊಸಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿಯಾಗಿತ್ತು.