ಬೆಂಗಳೂರು, ಮೇ.11 (DaijiworldNews/HR): ರಾಜ್ಯ ಸರ್ಕಾರವು ಕೊರೊನಾದ ಮೂರನೇ ಅಲೆಯನ್ನು ಎದುರಿಸಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಕೊರೊನಾ 2ನೆ ಅಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಆರ್. ಅಶೋಕ್ ಈ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಕೊರೊನಾ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ರೀತಿಯಲ್ಲಿ ಸಜ್ಜಾಗಿದ್ದು, 2ನೇ ಅಲೆಯಲ್ಲಾದ ತಪ್ಪುಗಳು ಮೂರನೇ ಅಲೆಯಲ್ಲಿ ಪುನರಾವರ್ತನೆಯಾಗೋದಿಲ್ಲ, ಅದಕ್ಕಾಗಿ ಮೂರ್ನಾಲ್ಕು ದಿನಗಳಲ್ಲಿ ಕೊರೊನಾ ವಿಶೇಷ ಟಾಸ್ಕ್ ಫೋರ್ಸ್ ರಚನೆಯಾಗಲಿದೆ" ಎಂದರು.
ಇನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ವಿಶೇಷ ಟಾಸ್ಕ್ ಫೋರ್ಸ್ನ್ನು ಅಂತಿಮ ಮಾಡಲಿದ್ದು, ಕೊರೊನಾ 3ನೇ ಅಲೆ ಹೆಚ್ಚಾಗಲು ಬಿಡೋದಿಲ್ಲ. ಪ್ರತಿ ಜಿಲ್ಲೆಯಲ್ಲೂ ಮಕ್ಕಳಿಗೆ ಪ್ರತ್ಯೇಕ ಕೇಂದ್ರಗಳನ್ನ ನಿರ್ಮಾಣ ಮಾಡಲಿದ್ದು, ಕಂದಾಯ ಇಲಾಖೆ ವತಿಯಿಂದ ಆರೈಕೆ ಕೇಂದ್ರಗಳನ್ನ ನಿರ್ಮಿಸಲಿದ್ದೇವೆ" ಎಂದು ಹೇಳಿದ್ದಾರೆ.