ಬೆಂಗಳೂರು, ಮೇ 11 (DaijiworldNews/SM): ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಮಂಗಳವಾರದಂದು ಮತ್ತೆ 39510 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 480 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಮಂಗಳವಾರದಂದು 22584 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1405869 ಮಂದಿ ಗುಣಮುಖರಾಗಿದ್ದಾರೆ. ಇನ್ನು ಪ್ರಸ್ತುತ ಜಿಲ್ಲೆಯಲ್ಲಿ 587452 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಇಲ್ಲಿಯ ತನಕ ಜಿಲ್ಲೆಯಲ್ಲಿ 19852 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು 2013193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಬೆಂಗಳೂರಿನಲ್ಲಿ 15879 ಮಂದಿಯಲ್ಲಿ ಇಂದು ಸೋಂಕು ಪತ್ತೆಯಾಗಿದ್ದು, 259 ಮಂದಿ ಮಂಗಳವಾರದಂದು ಸೋಂಕಿಗೆ ಬಲಿಯಾಗಿದ್ದಾರೆ.