ನವದೆಹಲಿ, ಮೇ.12 (DaijiworldNews/PY): ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,33,40,938 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,205 ಮಂದಿ ಸೋಂಕಿಗೆ ಬಲಿಯಾಗಿದ್ದು, ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,54,197 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.
ದೇಶದಲ್ಲಿ ಒಂದೇ ದಿನ 3,55,338 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಒಟ್ಟು 1,93,82,642 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 37,04,099 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.