ಬೆಂಗಳೂರು, ಮೇ.12 (DaijiworldNews/PY): "ನಾಡಿನ ಮಹಿಳೆಯರ ಮೇಲೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಕೂಡಲೇ 71 ಕೇಂದ್ರಗಳು ಕಾರ್ಯನಿರ್ವಹಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಮೂಲಕ ಅವರ ಬಾಳಲ್ಲಿ ಭರವಸೆ ಮೂಡಿಸುತ್ತಿದ್ದ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ" ಎಂದು ಹೇಳಿದ್ದಾರೆ.
"ಮುಖ್ಯಮಂತ್ರಿಗಳ ಮಹಿಳಾಪರ ಬಜೆಟ್ ಎಂಬುದು ಬರಿ ಬಾಯಿಮಾತಿಗಷ್ಟೇ ಸೀಮಿತವೇ? ನಾಡಿನ ಮಹಿಳೆಯರ ಮೇಲೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಕೂಡಲೇ 71 ಕೇಂದ್ರಗಳು ಕಾರ್ಯನಿರ್ವಹಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ" ಎಂದಿದ್ದಾರೆ.