ಬೆಂಗಳೂರು, ಮೇ 12 (DaijiworldNews/SM): ರಾಜ್ಯದಲ್ಲಿ ಮತ್ತೆ 39998 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಇಳಿಕೆ ಕಂಡಿದೆ. ಆದರೆ, ಸಾವಿನ ಸಂಖ್ಯೆ ಬುಧವಾರವೂ ಹೆಚ್ಚಳವಾಗಿದೆ. ಮತ್ತೆ 517 ಮಂದಿ ಸೋಂಕಿಗೆ ಬಲಿಯಾಗಿರುವ ಬಗ್ಗೆ ಆರೋಗ್ಯ ಇಲಾಖೆ ವರದಿ ಮಾಡಿದೆ.
ಇನ್ನು ರಾಜ್ಯದಲ್ಲಿ ಪ್ರಸ್ತುತ 592182 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 20368 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ 34752 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 1440621 ಮಂದಿ ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಇಲ್ಲಿಯ ತನಕ ರಾಜ್ಯದಲ್ಲಿ ಒಟ್ಟು 2053191 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರವೊಂದರಲ್ಲೇ ಅತ್ಯಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಬುಧವಾರ 16286 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. 275 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.