ಬೆಂಗಳೂರು, ಮೇ 12 (DaijiworldNews/SM): 104 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಿದ್ದ ದೊರೆಸ್ವಾಮಿ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ವೈದ್ಯರು ಮತ್ತು ಸಿಬ್ಬಂದಿ ದೊರೆಸ್ವಾಮಿಯವರಿಗೆ ಚಿಕಿತ್ಸೆ ನೀಡಿದ್ದಾರೆ.
ದೊರೆಸ್ವಾಮಿ 104ನೇ ವಯಸ್ಸಿನಲ್ಲೂ ಕೊರೋನಾ ವಿರುದ್ಧದ ಯುದ್ಧವನ್ನು ಗೆದ್ದುಬಂದ ಸ್ವಾತಂತ್ರ್ಯ ಸೇನಾನಿ. 104ರ ಹರೆಯದಲ್ಲೂ ಕೋವಿಡ್ ವಿರುದ್ಧ ಜಯಶಾಲಿಯಾಗುವ ಮೂಲಕ ರಾಜ್ಯದ ಜನತೆಯಲ್ಲಿ ಹೊಸ ಹುರುಪು ಮೂಡಿಸಿದೆ.