ನವದೆಹಲಿ, ಮೇ.13 (DaijiworldNews/HR): ಭಾರತದಲ್ಲಿ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಏರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,120 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,62,727 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 3,52,181 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 2 ,37,03,665 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಇದುವರೆಗೆ 1,97,34,823 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 2,58,317 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನು ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 20 ಸಾವಿರ ಗಡಿದಾಟಿದ್ದು, ಬುಧವಾರ 39,998 ಮಂದಿಗೆ ಸೋಂಕು ತಗುಲಿದ್ದು, 517 ಸೋಂಕಿತರು ಸಾವನಪ್ಪಿ, 34752 ಸೋಂಕಿತರು ಗುಣಮುಖರಾಗಿದ್ದಾರೆ.