ಮುಂಬೈ, ಮೇ.13 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಈಗಿರುವ ಲಾಕ್ಡೌನ್ ಅನ್ನು ಮೇ 30ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಮೇ 16ರಿಂದ ಮೇ 30ವೆರಗೂ ಲಾಕ್ಡೌನ್ ವಿಸ್ತರಣೆ ಮಾಡಿ ಉದ್ಧವ್ ಠಾಕ್ರೆ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಈ ಮೂಲಕ ಮಹಾರಾಷ್ಟ್ರವು ಸತತ ಎರಡು ವಾರಗಳ ಕಾಲ ಮತ್ತೆ ಸಂಪೂರ್ಣ ಸ್ತಬ್ಧವಾಗಲಿದೆ.
ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 46,781 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 816 ಸಾವುಗಳು ಸಂಭವಿಸಿದೆ.