ಬೆಂಗಳೂರು ಮೇ.13 (DaijiworldNews/HR): ಕರ್ನಾಟಕದ ಎಲ್ಲ ಸಚಿವರ ಒಂದು ವರ್ಷದ ವೇತನವನ್ನುಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಕೂರ್ನಾ ಪ್ರಕರಣಗಳು ದಿನದಿಂದ ದಿಕೆಕ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸಚಿವರ ಒಂದು ವರ್ಷದ ವೇತನವನ್ನು ಕೊರೊನಾ ಪರಿಹಾರ ನಿಧಿಗೆ ಪಾವತಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ಮೇ 3ರಂದು ಟಿಪ್ಪಣಿಯಲ್ಲಿ ಸೂಚಿಸಿದ್ದರು.
ಇನ್ನು ಇದೀಗ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೊರೊನಾ ಪರಿಹಾರ ನಿಧಿಗೆ ಪಾವತಿಸಿ ಡಿಪಿಎಆರ್ ಆದೇಶ ಹೊರಡಿಸಿದೆ ಎನ್ನಲಾಗಿದೆ.