ನವದೆಹಲಿ, ಮೇ.13 (DaijiworldNews/HR): ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಎಂಟನೇ ಕಂತು ಮೇ.14ರಂದು ರೈತರ ಖಾತೆಗಳಿಗೆ ವರ್ಗಾಹಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಪ್ರಧಾನಿ ಮೋದಿ ನಾಳೆ ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಂಟನೇ ಕಂತು ಬಿಡುಗಡೆ ಮಾಡಲಿದ್ದು, ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಪ್ರಧಾನ ಮಂತ್ರಿಯವರ ಕಚೇರಿ ಪ್ರಕಾರ, 9.5 ಕೋಟಿಗಿಂತ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 19,000 ಕೋಟಿ ರೂಪಾಯಿಗೂ ಹೆಚ್ಚು ಹಣ ವರ್ಗಾವಣೆ ಆಗಲಿದ್ದು, ಈ ಯೋಜನೆಯ ಅಡಿಯಲ್ಲಿ 7ನೇ ಕಂತನ್ನ ಡಿಸೆಂಬರ್ 25, 2020ರಲ್ಲಿ ಬಿಡುಗಡೆ ಮಾಡಲಾಯಿತು.
ಇನ್ನು ಈ ಯೋಜನೆಯಡಿ ಇಲ್ಲಿಯವರೆಗೆ 1.15 ಲಕ್ಷ ಕೋಟಿಗಳನ್ನ ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.