ಬೆಂಗಳೂರು, ಮೇ 14(DaijiworldNews/MS): ರಾಜ್ಯದಲ್ಲಿ ಕೊರೊನಾದ ಸಂಭವನೀಯ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ನಾರಾಯಣ ಹೆಲ್ತ್ ಸಂಸ್ಥೆ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಂಭವನೀಯ ಮೂರನೇ ಅಲೆಯೂ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಈ ವೇಳೆ ಮಕ್ಕಳಿಗೆ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ನಿಟ್ಟಿನಲ್ಲಿ ಡಾ.ದೇವಿಪ್ರಸಾದ್ ಶೆಟ್ಟಿಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ಹೇಳಿದ್ದಾರೆ.
ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿರುವ ಪ್ರೋ.ಗಗನ್ ದೀಪ್ ಕಾಂಗ್ ಅವರನ್ನು ರಾಜ್ಯದ ವ್ಯಾಕ್ಸಿನೇಶನ್ ಕಾರ್ಯತಂತ್ರದ ಸಲಹೆಗಾರರಾಗಿ ನೇಮಿಸಲಾಗುವುದು . ಇದಲ್ಲದೆ ಕಾರ್ಯಪಡೆಯಲ್ಲಿ ಇನ್ನಿತರ ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇರಲಿದ್ದಾರೆ.