ನವದೆಹಲಿ, ಮೇ.14 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದೆ.
ಈ ನಡುವೆ 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 2,62,317ಕ್ಕೆ ಏರಿದೆ. ಸದ್ಯ ದೇಶದಲ್ಲಿ 37,04,893 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 3,44,776 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 2,00,79,599 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಟ್ಟು 31,13,24,100 30,75,83,991 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ, ಇಲ್ಲಿಯವರೆಗೂ ಒಟ್ಟಾರೆ 17,92,98,584 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.