ಗುವಾಹಟಿ, ಮೇ.14 (DaijiworldNews/HR): ಒಂದೇ ಜಾಗದಲ್ಲಿ 18 ಆನೆಗಳು ಸಾವನ್ನಪ್ಪಿದ್ದು, ಈ ಆನೆಗಳು ಸಿಡಿಲು ಬಡಿದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿರುವ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತು ವನ್ಯಜೀವಿ ವಿಭಾಗದಮುಖ್ಯ ಸಂರಕ್ಷಣಾಧಿಕಾರಿ ಅಮಿತ್ ಶಾಯ್ ಮಾಹಿತಿ ನೀಡಿದ್ದು, ಗುರುವಾರ ಮಧ್ಯಾಹ್ನದ ತನಕ ನಮ್ಮ ತಂಡ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ, ಬೆಟ್ಟ ಪ್ರದೇಶವೊಂದರ ಮೇಲೆ 14, ಕೆಳಗೆ 4 ಆನೆಗಳ ಶವಗಳು ಪತ್ತೆಯಾಗಿದ್ದು, ಆನೆಗಳು ಸಿಡಿಲು ಬಡಿದು ಮೃತಪಟ್ಟಿವೆ ಎಂಬುದಾಗಿ ತಿಳಿದು ಬಂದಿದ್ದು, ಮೃತಪಟ್ಟ ಆನೆಗಳ ಮರಣೋತ್ತರ ಪರೀಕ್ಷೆ ಇಂದು ನಡೆಸಲಾಗುತ್ತದೆ" ಎಂದು ತಿಳಿದ್ದಾರೆ.
ಇನ್ನು ಆನೆಗಳು ಸಾಲಾಗಿ ಬಿದ್ದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಅನೇಕರು ಈ ಘಟನೆಗೆ ಸಂತಾಪವನ್ನು ಸೂಚಿಸಿದ್ದಾರೆ.