ನವದೆಹಲಿ, ಮೇ.14 (DaijiworldNews/HR) : ಕೊರೊನಾದಿಂದ ಅನಾಥರಾದ ಮಕ್ಕಳ ಶಿಕ್ಷಣ, ಪಾಲನೆಯ ಜವಾಬ್ದಾರಿಯನ್ನು ದೆಹಲಿ ಸರ್ಕಾರ ಹೊತ್ತುಕೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ಕೊರೊನಾ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅವರ ಪಾಲನೆ ಹಾಗೂ ಇತರೆ ವೆಚ್ಚಗಳನ್ನು ಭರಿಸುವುದಾಗಿ ಘೋಷಿಸಿದ್ದು, ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ನಮ್ಮ ಸರ್ಕಾರ ಆರ್ಥಿಕ ಸಹಾಯ ನೀಡಲಿದೆ" ಎಂದರು.
ಇನ್ನು ಕೊರೊನಾ ಸೋಂಕಿಗೆ ತುತ್ತಾಗಿ ಹಲವರು ಪ್ರಾಣ ಕಳೆದುಕೊಂಡಿದ್ದು, ಅವರ ಮಕ್ಕಳ ಪಾಲನೆ ಮಾಡುವ ಜವಾಬ್ದಾರಿ ನಮ್ಮದು, ನಾನು ನಿಮ್ಮೊಂದಿಗೆ ಇರುತ್ತೇನೆ, ಸಂತ್ರಸ್ತರ ಕಣ್ಣೊರೆಸುವ ಪ್ರಯತ್ನ ಮಾಡುತ್ತೇನೆ" ಎಂದಿದ್ದಾರೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಗುರುವಾರ ಕೊರೊನಾ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 'ಉಚಿತ ಶಿಕ್ಷಣ ಹಾಗೂ ಇತರೆ ವೆಚ್ಚಗಳನ್ನು ಭರಿಸುವುದಾಗಿ ಘೋಷಣೆ ಮಾಡಿದ್ದರು.